26.5 C
ಪುತ್ತೂರು, ಬೆಳ್ತಂಗಡಿ
September 20, 2026
ಪ್ರಮುಖ ಸುದ್ದಿ

ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ

ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಮೇಲಂತಬೆಟ್ಟು ಇದರ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆಯು ಎ.4ರಂದು ದೇವಸ್ಥಾನದ ಸಭಾಂಗಣದಲ್ಲಿ ಜರುಗಿತು.
ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಧರ್ಮದ ಬಗ್ಗೆ ಸಂದೇಶ ನೀಡಿದರು.
ಮುಖ್ಯ ಅಥಿಗಳಾಗಿ ವಸಂತ ಸಾಲ್ಯಾನ್, ಪ್ರಾದೇಶಿಕ ನಿರ್ದೇಶಕರು, ಎಸ್.ಕೆ.ಡಿ.ಆರ್.ಡಿ.ಪಿ., ಉಡುಪಿ, ಸತೀಶ್ ಶೆಟ್ಟಿ, ನಿರ್ದೇಶಕರು, ಎಸ್.ಕೆ.ಡಿ.ಆರ್.ಡಿ.ಪಿ., ದ.ಕ. ಜಿಲ್ಲೆ ಭಾಗವಹಿಸಿದ್ದರು. ವೇದಿಕೆಯಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಂಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶ್ರೀ ಕ್ಷೇತ್ರ, ನಾಳ ಇವರಿಂದ ಭಜನಾ ಕಾರ್ಯಕ್ರಮವನ್ನು ರವೀಂದ್ರನಾಥ ಜಿ., ಗುಂಪೋಳಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ಸ್ಥಳೀಯ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆಯಿತು.

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧ‌ನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
error: Content is protected !!