28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಭಗವಾನ್ ಶ್ರೀ 1008 ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಬೆಳ್ತಂಗಡಿ ತಾಲೂಕು ಕಚೇರಿ ಆಡಳಿತ ಸೌಧದಲ್ಲಿ ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಚುನಾವಣಾಧಿಕಾರಿ ಮಂಗಳೂರಿನ ಯೋಗೀಶ್ ರವರು ಮಾತನಾಡಿ ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಸಂದೇಶಗಳನ್ನು ಪಾಲಿಸುವಂತೆ ಕರೆ ನೀಡಿದರು.

ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ನಗರ ಪಂಚಾಯತಿ ಮುಖ್ಯ ಅಧಿಕಾರಿ ನಟರಾಜ್, ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಕೆ. ಜಯಕೀರ್ತಿ ಜೈನ್, ಶಿಶಿಲ ಜಿನಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ವಿಜಯ ಕುಮಾರ್, ಸರಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಜಯರಾಜ್ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶ್ರೀಮತಿ ತಾರಕೇಸರಿ ನಿರೂಪಿಸಿ, ಪರಮೇಶ್ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ರಾಜ್ಯಮಟ್ಟದ ಕ್ರೀಡಾಕೂಟ: ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಪೂಜಾರಿ ಮರೋಡಿ ರವರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರವರು ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷ ಹರೀಶ್ ಕಾರಿಂಜರವರ ಮನೆಗೆ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!