ಮೇಲಂತಬೆಟ್ಟು : ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ ಬ್ರಹ್ಮಕಲಶೋತ್ಸವದ ಅಂಗವಾಗಿ ಎ.5ರಂದು ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀ ಯೋಗಿಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ಮಹಾಲಕ್ಷ್ಮೀ ಕ್ಷೇತ್ರ, ಶ್ರೀಧಾಮ ಮಾಣಿಲ ಇವರು ಧಾರ್ಮಿಕ ಸಂದೇಶ ನೀಡಿದರು.
ಮುಖ್ಯ ಅತಿಥಿಗಳಾಗಿ ಚಿದಾನಂದ ಎಲ್ದಡ್ಕ ಅಧ್ಯಕ್ಷರು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಅನಿಲ್ ಕುಮಾರ್ ಎಸ್. ಎಸ್., ಮುಖ್ಯ
ನಿರ್ವಹಣಾಧಿಕಾರಿಗಳು, ಶ್ರೀ ಕ್ಷೇ.ಧ.ಗ್ರಾ. ಯೋಜನೆ, ಧರ್ಮಸ್ಥಳ, , ಧನಂಜಯ ರಾವ್, ನ್ಯಾಯವಾದಿಗಳು ಬೆಳ್ತಂಗಡಿ, ಪದ್ಮನಾಭ ಮಾಣಿಂಜ, ಅಧ್ಯಕ್ಷರು, ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ,
ಚಂದ್ರರಾಜ್ ನೂಜೇಲು ಸದಸ್ಯರು ಗ್ರಾ.ಪಂ ಮೇಲಂತಬೆಟ್ಟು, ವೇಣುಗೋಪಾಲ್ ಶೆಟ್ಟಿ ಸದಸ್ಯರು ಗ್ರಾ.ಪಂ ಮೇಲಂತಬೆಟ್ಟು, ಭಾಗವಹಿಸಿದ್ದರು.
ವೇದಿಕೆಯಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು,ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಕ ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಕ್ತರು, ಗ್ರಾಮಸ್ಥರು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕು| ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ದೇವಿಕಿರಣ್ ಕಲಾನಿಕೇತನ, ಗುರುವಾಯನಕೆರೆ ವಿದುಷಿ ಶ್ರೀಮತಿ ಸ್ವಾತಿ ಜಯರಾಂ ಮತ್ತು ವಿದುಷಿ ಶ್ರೀಮತಿ ಪೃಥ್ವಿ ಸತೀಶ್ ಇವರ ಶಿಷ್ಯವೃಂದದವರಿಂದ ನೃತ್ಯಾರ್ಪಣಂ ಕಾರ್ಯಕ್ರಮ ನಡೆಯಿತು. ಸಂಜೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳೆಂಜ ಇವರಿಂದ ಭಜನಾ ಕಾರ್ಯಕ್ರಮ ಜರುಗಿತು.