29.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿ

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ


ಪಟ್ರಮೆ : ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ದಾರುಣ ಘಟನೆ ಎ.6 ರಂದು ವರದಿಯಾಗಿದೆ.
ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ( 22ವ) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟರೆ, ಅವರ ನೆರೆ ಮನೆಯವರಾದ ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21ವ) ಸುರತ್ಕಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಮೃತಪಟ್ಟರೆನ್ನಲಾಗಿದೆ. ಇವರಿಬ್ಬರು ಸೇವಾ ಪ್ರತಿನಿಧಿಯಾಗಿ ಕೆಲ ಸಮಯಗಳಿಂದ ಕಾರ್ಯವನ್ನು ನಿರ್ವಹಿಸುತ್ತಿದ್ದರು.
ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವೆಂದು ನರಳಾಡಿ ತೀವ್ರ ಅಸ್ವಸ್ಥಗೊಂಡಿದ್ದರು. ಇವರಿಬ್ಬರನ್ನು ಸ್ಥಳೀಯರ ಸಹಕಾರದಲ್ಲಿ ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದರು. ಲಾವಣ್ಯರನ್ನು ಅವರ ಮನೆಯವರು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಅವಲ್ಲಿಯ ವೈದ್ಯರ ಸಲಹೆಯಂತೆ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಕ್ಷಿತಾ ಅವರು ಎ.6 ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರೆ, ಲಾವಣ್ಯ ಇಂದು ಮಧ್ಯಾಹ್ನ ಸುರತ್ಕಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆನ್ನಲಾಗಿದೆ. ಇವರಿಬ್ಬರೂ ಪಟ್ಟೂರಿನಲ್ಲಿ ನೆರೆಕರೆ ಮನೆಯನ್ನು ಹೊಂದಿದ್ದಾರೆ. ಇವರ ಸಾವಿಗೆ ಕಾರಣ ಏನು ಕಾರಣ ಎಂದು ಸ್ವಷ್ಟಗೊಂಡಿಲ್ಲ. ಈ ಬಗ್ಗೆ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿದು ಬರಬೇಕಾಗಿದೆ. ಇವರಿಬ್ಬರು ಆತ್ಮಹತ್ಯೆ ಮಾಡಿಕೊಂಡರೇ, ಅಥವಾ ಇನ್ನೇನಾದರೂ ನಡೆದಿದೆಯೇ ಎಂಬುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಪುದುವೆಟ್ಟು: ಡಿಸೇಲ್ ಪೈಪ್ ಲೈನ್ ಕೊರೆದು ರೂ. 9 ಲಕ್ಷ ಮೌಲ್ಯದ ಡಿಸೇಲ್ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!