37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

ಚಾರ್ಮಾಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ಮೀಟರ್ ಕೆಳಗಿನ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮಹಿಳೆ ಮೃತಪಟ್ಟ ಘಟನೆ ಎ.9ರಂದು ರಾತ್ರಿ ನಡೆದಿದೆ.
ಉಜಿರೆ ನಿವಾಸಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾಗಿದ್ದ ತಮ್ಮ ಸಂಬಂಧಿಕರ ಕಾರ್ಯಕ್ರಮಕ್ಕೆ ಹೋಗಿ ಹಿಂದಿರುಗುತ್ತಿರುವಾಗ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು .

ಸಂಬಂಧಿಕ ಮಹಿಳೆ ಸರೋಜಿನಿ ಶೆಟ್ಟಿ (55) ಮೃತಪಟ್ಟ ದುರ್ದೈವಿಯಾಗಿದ್ದಾರೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪುಷ್ಪಾವತಿ ಆರ್.ಶೆಟ್ಟಿ (62ವ) ಅವರ ಕೈಗೆ ಗಾಯವಾಗಿದ್ದು, ಪುತ್ರಿ ಪೂರ್ಣಿಮಾ ಶೆಟ್ಟಿ (38ವ) ಅವರ ತಲೆಗೆ ಗಂಭೀರ ಗಾಯವಾಗಿದೆ. ಮೊಮ್ಮಕ್ಕಳಾದ ಸಮೃದ್ (13ವ) ಹಾಗೂ ಸಾಕ್ಷಿ (11ವ) ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಚಾಲಕ ಸುರ್ಯ ರಸ್ತೆಯ ಅರುಣ್ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
error: Content is protected !!