ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸ್ನೇಹ ಸಮ್ಮಿಲನ ಹಾಗೂ ಇಫ್ತಾರ್ ಕೂಟ ಕಾರ್ಯಕ್ರಮವು ಗುರುವಾಯನಕೆರೆ ಶಾದಿಮಹಲ್‌ನಲ್ಲಿ ಏರ್ಪಡಿಸಲಾಗಿತ್ತು.
ಎಸ್‌ಡಿಪಿಐ ವಿಧಾನಸಭಾ ಅಧ್ಯಕ್ಷರಾದ ನವಾಝ್ ಕಟ್ಟೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ದೇಶದಲ್ಲಿ ನಡೆಯುತ್ತಿರುವ ಅರಾಜಕತೆಯನ್ನು ಎದುರಿಸಲು ತಮ್ಮ ವೈಯುಕ್ತಿಕ ಹಿತಾಸಕ್ತಿಗಳನ್ನು ಮರೆತು ಮುಸ್ಲಿಮರು ಒಂದಾಗಬೇಕು ಎಂದು ಕರೆಯಿತ್ತರು.
ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭಾಗವಹಿಸಿದ್ದರು.
ಇನ್ನೋರ್ವ ಮುಖ್ಯ ಅತಿಥಿ ಪ್ರಗತಿಪರ ಹೋರಾಟಗಾರ, ಚಿಂತಕ ದಾಮೋದರ್ ಬೆಳ್ತಂಗಡಿ ಮಾತನಾಡಿ, ಇಫ್ತಾರ್ ಮಹತ್ವದ ಬಗ್ಗೆ ಹಾಗೂ ಮುಂಬರುವ ಚುನಾವಣೆ ನಮಗೆ ಎಷ್ಟು ಮುಖ್ಯ ಮತ್ತು ಯಾವ ರೀತಿ ಚುನಾವಣೆಯನ್ನು ನಾವು ಎದುರಿಸಬೇಕೆಂದು ತಿಳಿಸಿದರು.
ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಸಮಾರೋಪ ಮಾತನ್ನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹನೀಫ್ ಪುಂಜಾಲಕಟ್ಟೆ, ಕಾರ್ಯದರ್ಶಿಗಳಾದ ಫಝಲ್ ಉಜಿರೆ, ಸಾದಿಕ್ ಲಾಯಿಲ, ಅಶ್ರಫ್ ಕಟ್ಟೆ, ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಅಝೀಝ್ ಝುಹರಿ, ಬೆಳ್ತಂಗಡಿ ತಾಲೂಕಿನ ಜಮಾಅತ್ ಬಾಂಧವರು ಹಾಗೂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಕ್ಷದ ಹಲವು ನಾಯಕರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.