24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು.

ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ ರೂ.10 ಲಕ್ಷ ಮೊತ್ತವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು , ತಕ್ಷಣವೇ ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!