24.5 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ರೂ.10 ಲಕ್ಷ ಸಾಗಾಟ ಮಾಡುತ್ತಿದ್ದ ಎಟಿಎಂ ವಾಹನವನ್ನು ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.10 ರಂದು ರಾತ್ರಿ ವಶಕ್ಕೆ ಪಡೆದಿದ್ದಾರೆ.

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು.

ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ ದಾಖಲೆಗಳಿಲ್ಲದೆ ಅವಧಿ ಮೀರಿ ರೂ.10 ಲಕ್ಷ ಮೊತ್ತವನ್ನು ರಾತ್ರಿ 10 ಗಂಟೆ ಸುಮಾರಿಗೆ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು , ತಕ್ಷಣವೇ ಹಣ ಹಾಗೂ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Related posts

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇದರ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!