23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಇದರ ವತಿಯಿಂದ ಬಂದಾರು ಗ್ರಾಮದ ಮೈರೋಳ್ತಡ್ಕ ಒಕ್ಕೂಟದಲ್ಲಿ ಆರಂಭಗೊಂಡ ಶಾಂಭವಿ ಜ್ಞಾನ ವಿಕಾಸ ಕೇಂದ್ರವು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಲ್ಲಿ ಕಳೆದ 23ವರ್ಷಗಳಿಂದ ನಡೆದು ಬಂದಿದ್ದು, ಕೇಂದ್ರದ ಸದಸ್ಯರು ಮಹಿಳಾ ಸಬಲೀಕರಣ, ಕೌಟುಂಬಿಕ ಸಾಮರಸ್ಯ, ವೈಯುಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ, ಆರ್ಥಿಕ ಸಬಲೀಕರಣ, ಕೌಶಲ್ಯ ಅಭಿವೃದ್ಧಿ ಮುಂತಾದ ಹಲವು ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡು ಉತ್ತಮ ರೀತಿಯ ಅಭಿವೃದ್ಧಿ ಹೊಂದಿರುತ್ತಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಈ ಕೇಂದ್ರಗಳಿಗೆ ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರ ಎಂದು ಗುರುತಿಸಿ ಅಭಿನಂದನಾ ಪ್ರಮಾಣ ಪತ್ರ ವನ್ನು ನೀಡಲಾಯಿತು.

ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಶ್ರೀಮತಿ ಹರಿಣಾಕ್ಷಿ ಸ್ವಾಗತಿಸಿ, ಶ್ರೀಮತಿ ಗಿರಿಜಾ ಧನ್ಯವಾದವಿತ್ತರು.

Related posts

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಚಿಬಿದ್ರೆ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya
error: Content is protected !!