ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉಜಿರೆ: ವಿಧಾನಸಭಾ ಚುನಾವಣೆ-2023 ರ ಸಂಬಂಧ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ನೀರಚಿಲುಮೆ ಎಂಬಲ್ಲಿ ಶಶಿಧರ್ ರವರು, ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಎ.10ರಂದು ನಡೆದಿದೆ.

ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು. ದಕ್ಷಿಣ ಕನ್ನಡ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗರವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯರವರ ನಿರ್ದೇಶನದಂತೆ ಈ ಕಾಯಾ೯ಚರಣೆ ನಡೆಯಿತು.

ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, 8,640ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಆರೋಪಿಯ ವಿರುದ್ದ ಮೊಕದ್ದಮೆಯನ್ನು ದಾಖಲಿಸಲಾಗಿದೆ. ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ. ವಾಹನ ಹಾಗೂ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ.1,53,360 ಆಗಿರುತ್ತದೆ.

ಪ್ರಕರಣವನ್ನು ನವೀನ್ ಕುಮಾರ್‌ ಅಬಕಾರಿ ನಿರೀಕ್ಷಕರು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!