ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘ ಇದರ 12ನೇ ವರ್ಷದ ವಾರ್ಷಿಕ ಮಹಾಸಭೆಯು ಎ.11 ರಂದು ಸಂಘದ ಅಧ್ಯಕ್ಷ ಎಸ್. ಉಮೇಶ್ ಭಂಡಾರಿ ಉಜಿರೆ ಇವರ ಅಧ್ಯಕ್ಷತೆಯಲ್ಲಿ ಪಣೆಜಾಲು ಭಂಡಾರಿ ಸಮಾಜ ಸಂಘದ ಆವರಣದಲ್ಲಿ ಜರುಗಿತು.
ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ ಕರಿಂಜೆ ಕಾರ್ಯಕ್ರಮ ಉದ್ಘಾಟಿಸಿದರು.
ಸವಿತಾ ಸಮಾಜ ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಬೆಳ್ತಂಗಡಿ ತಾಲೂಕು ಭಂಡಾರಿ ಯುವ ವೇದಿಕೆಯ ಸದಸ್ಯರನ್ನು ಹಾಗೂ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಲ್ಲಿ ನಿಸ್ವಾರ್ಥವಾಗಿ ತನ್ನನ್ನು ತೊಡಗಿಸಿಕೊಳ್ಳುವ ಹಾಗೂ ಸಕ್ರೀಯವಾಗಿ ಪಾಲ್ಗೊಳ್ಳುವ ಚಂದ್ರಶೇಖರ ಭಂಡಾರಿ ಗುರುವಾಯನಕೆರೆ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಉಪಾಧ್ಯಕ್ಷ ಶಶಿಧರ ಭಂಡಾರಿ ಕಾರ್ಕಳ, ಕಾರ್ಕಳ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಶೇಖರ ಭಂಡಾರಿ ಕಾರ್ಕಳ, ಬೆಳ್ತಂಗಡಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಗೋಪಾಲ ಭಂಡಾರಿ ಪರಾರಿ, ಕಾರ್ಕಳ ಭಂಡಾರಿ ಸಮಾಜ ಸಂಘದ ಸಂಘಟನಾ ಕಾರ್ಯದರ್ಶಿ ಸದಾಶಿವ ಭಂಡಾರಿ, ಉತ್ಸವ ಸಮಿತಿ ಜೊತೆ ಕಾರ್ಯದರ್ಶಿ ಕೃಷ್ಣ ಭಂಡಾರಿ ಕಾರ್ಕಳ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿ ಸುರೇಶ್ ಭಂಡಾರಿ ಹೆಬ್ರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ 2023ರ ವಾರ್ಷಿಕ ಉತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತ್ಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಾರ್ಕೂರು ಕಚ್ಚೂರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಭಂಡಾರಿ ಬಿರ್ತಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಬೆಳಿಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಬಳಿಕ ನಡೆದ ವಾರ್ಷಿಕ ಮಹಾಸಭೆಯಲ್ಲಿ ಸತೀಶ್ ಭಂಡಾರಿ ನಾಳ ಪ್ರಾರ್ಥಿಸಿ, ಕಾರ್ಯದರ್ಶಿ ಅಶೋಕ್ ಭಂಡಾರಿ ಗುಂಡಿಯಲ್ಕೆ ಸಂಘದ ವಾರ್ಷಿಕ ವರದಿ ವಾಚಿಸಿದರು. ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಭಂಡಾರಿ ಕೋಡ್ಯೇಲು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಭಂಡಾರಿ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಭಂಡಾರಿ ಉಜಿರೆ ವಂದಿಸಿದರು. ಸಂಘದ ಜತೆ ಕಾರ್ಯದರ್ಶಿ ನಾರಾಯಣ ಬಿ ಕುಂಡದಬೆಟ್ಟು ಕಾರ್ಯಕ್ರಮ ನಿರೂಪಿಸಿದರು.