24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಸಿ.ಎಂ. ಬೊಮ್ಮಾಯಿಯವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರ ವಾಹನ ತಪಾಸಣೆಗೆ ಒಳಪಡಿಸಿದ ಘಟನೆಯ ಬೆನ್ನಲ್ಲೇ ಎ.13 ರಂದು ಚುನಾವಣಾ ಅಧಿಕಾರಿಗಳು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ ಸುದರ್ಶನ ಅವರ ಕಾರನ್ನು ತಪಾಸಣೆ ನಡೆಸಿದ್ದಾರೆ‌.

ಅಧಿಕಾರಿ ಜಯಕೀರ್ತಿ ಹೆಚ್.ಬಿ. ಅವರಿದ್ದ ತಂಡವು ಐದು ಪೊಲೀಸ್ ಭದ್ರತಾ ವಾಹನದೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಚಾರ್ಮಾಡಿ ಘಾಟ್ ರಸ್ತೆ ಮೂಲಕ ಬರುತ್ತಿದ್ದಾಗ ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ತಡೆದು ನಿಲ್ಲಿಸಿ ಕಾರು ಪರಿಶೀಲನೆ ನಡೆಸಿ ನಂತರ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಎಸ್.ಎಸ್.ಟಿ. ಅಧಿಕಾರಿ ಜಯಕೀರ್ತಿ ಹೆಚ್.ಬಿ., ಸುಖೇಶ್ ಜಿ, ಧರ್ಮಸ್ಥಳ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಸುನಿಲ್ ಹಾಗೂ ಸಿ.ಆರ್.ಪಿ.ಎಫ್. ಪಡೆ ಸಿಬ್ಬಂದಿಗಳು ತಮ್ಮ ಕರ್ತವ್ಯ ನಿರ್ವಹಿಸಿದರು.

Related posts

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!