September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯ

ಎ.18: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಎಪ್ರಿಲ್ 18 ಮಂಗಳವಾರದಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಸಹಸ್ರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಸಂತೆಕಟ್ಟೆಯಿಂದ ಮಿನಿ ವಿಧಾನಸೌಧವರೆಗೆ ಕಾಲ್ನಡಿಗೆ ಜಾಥಾದಲ್ಲಿ ಸಹಸ್ರಾರು ಕಾರ್ಯಕರ್ತರು, ಹಿತೈಷಿಗಳು ಭಾಗವಹಿಸಲಿದ್ದಾರೆ.

ಬಳಿಕ ಅಕ್ಬರ್ ಬೆಳ್ತಂಗಡಿಯವರು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ನವಾಝ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಅಕ್ಷಯ ಕಾಲೇಜಿನಲ್ಲಿ ‘ಪ್ರಿಸಮ್-2K26’ ಇಂಟರ್‌ಕ್ಲಾಸ್ ಫೆಸ್ಟ್

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
error: Content is protected !!