September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ತೆಂಕಕಾರಂದೂರು ಇಲ್ಲಿ ವಿಷ್ಣು ಮೂರ್ತಿ ಭಜನಾ ಮಂಡಳಿ, ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳ ಎ.ಬಿ ಒಕ್ಕೂಟ ಹಾಗೂ ಸ್ಥಳೀಯ ಸಂಘ, ಸಂಸ್ಥೆ ಸಹಕಾರದಲ್ಲಿ ರಾಮ್ ದಾಸ್ ಭಟ್ ಮುಂಡೂರು ಇವರ ಪೌರೋಹಿತ್ವದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಜರಗಿತು.

ಶ್ರೀ ವಿಷ್ಣು ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೃಷ್ಣ ಸಂಪಿಗೆತ್ತಾಯ, ಪ್ರಧಾನ ಅರ್ಚಕ ಪ್ರಭಾಕರ ಉಪಾಧ್ಯಾಯ, ವಿಷ್ಣು ಸಂಪಿಗೆತ್ತಾಯ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ, ಭಜನಾ ಮಂಡಳಿಯ ಅಧ್ಯಕ್ಷ ಯೋಗೀಶ್ ಸಪಲ್ಯ, ಕಾರ್ಯದರ್ಶಿ ವಿಶ್ವಾಸ್ ಕಳಿಕ್ಕ, ಗೌರವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಭಕ್ತಾಧಿಗಳು ಉಪಸ್ಥಿತರಿದ್ದರು.

ಸುಮಾರು ಅರುವತ್ತು ಮಂದಿ ವೃತಾಚಾರಿಗಳು ಸೇವೆಯಲ್ಲಿ ಪಾಲ್ಗೊಂಡಿದ್ದರು.

Related posts

ಬಂದಾರು ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕೊಡೆ ವಿತರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಗೋಕರ್ಣ ಶ್ರೀ ಭಾರತಿ ಪತ್ರಧಾಮ, ವಿಷ್ಣುಗುಪ್ತ ವಿಶ್ವ ವಿದ್ಯಾಪೀಠಕ್ಕೆ ಸ್ಕ್ಯಾನರ್ ಕೊಡುಗೆ

Suddi Udaya
error: Content is protected !!