— ಧರ್ಮಸ್ಥಳ -ಮಂಗಳೂರು ವಾಹನಗಳು ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್, ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚನೆ.
—- ಮಂಗಳೂರು-ಧರ್ಮಸ್ಥಳ ವಾಹನಗಳು ಗುರುವಾಯನಕೆರೆಯಿಂದ ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್, ಆದ್ರುಪೆರಾಲ್ ಮುಖಾಂತರ ಸಂಚರಿಸಲು ಸೂಚನೆ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣೆಗೆ ಎ.೧೭ರಂದು ಬಿಜೆಪಿ, ಕಾಂಗ್ರೆಸ್ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರಕ್ಕೆ ಆಡಚಣೆಯಾಗುವ ಹಿನ್ನಲೆಯಲ್ಲಿ ಬೆಳ್ತಂಗಡಿ ನಗರದಲ್ಲಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆಯನ್ನು ಸೂಚಿಸಿ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಅದೇಶ ನೀಡಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕಾರ್ಯಕರ್ತರ ಜೊತೆ ಒಂದೇ ದಿನ ನಾಮಪತ್ರ ಸಲ್ಲಿಸಲಿರುವುದರಿಂದ ಬೆಳ್ತಂಗಡಿ ಪೇಟೆಯಲ್ಲಿ ಅತ್ಯಧಿಕ ಜನ ಸಂದಣಿಯಾಗಿ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆ ಇದ್ದು, ಬದಲಿ ವ್ಯವಸ್ಥೆ ಮಾಡುವಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕರು ತಾಲೂಕು ಚುನಾವಣಾಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಮನವಿಯನ್ನು ಬೆಳ್ತಂಗಡಿ ತಹಶೀಲ್ದಾರ್ ದ.ಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದು, ತಹಶೀಲ್ದಾರ್ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ದ.ಕ ಜಿಲ್ಲಾಧಿಕಾರಿಗಳು ಈ ಆದೇಶ ಮಾಡಿದ್ದಾರೆ. ಎ.17ರಂದು ಬೆಳ್ತಂಗಡಿ ಪೇಟೆಯನ್ನು ಹಾದು ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲಾ ವಾಹನಗಳನ್ನು ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೊಯ್ಯೂರು ಕ್ರಾಸ್ ರಸ್ತೆಯ ಮೂಲಕ ಆದ್ರುಪೆರಾಲ್ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಸೂಚಿಸಲಾಗಿದೆ. ಹಾಗೆಯೇ iಡಲು ದ.ಕ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.