April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

ಬೆಳ್ತoಗಡಿ : ಪೊಲೀಸ್ ಇಲಾಖೆಯ ಕೋರಿಕೆಯಂತೆ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ ವಿಧಾನ ಸಭಾ ಚುನಾವಣೆ 2023 ಗೆ ಸಂಬಂಧಿಸಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಎ. 17 ರಂದು ಸೋಮವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನಾಮಪತ್ರ ಸಲ್ಲಿಕೆಯನ್ನು ಮೆರವಣಿಗೆ ಮೂಲಕ ನಗರದ ವಿವಿಧ ಭಾಗಗಳಿಂದ ಪ್ರಾರಂಭಿಸಿ ಮುಖ್ಯ ರಸ್ತೆಯ ಮೂಲಕವಾಗಿ ಚುನಾವಣಾ ಅಧಿಕಾರಿಗಳ ಕಛೇರಿಯವರೆಗೆ (ತಾಲೂಕು ಆಡಳಿತ ಸೌಧ) ಸಲ್ಲಿಸಲಿರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಸಮಸ್ಯೆ ಉಂಟಾಗುವ ಸಂಭವವಿರುವುದರಿಂದ ಎ. 17 ರಂದು ನಡೆಯುವ ಸೋಮವಾರದ ವಾರದ ಸಂತೆಯ ದಿನ ವರ್ತಕರು, ವ್ಯಾಪಾರಸ್ಥರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಸಂತೆಕಟ್ಟೆಯಿಂದ ಬಸ್‌ ನಿಲ್ದಾಣದವರೆಗೆ ವ್ಯಾಪಾರ ಮಾಡುವುದನ್ನು ನಿಷೇಧಿಸಿದೆ.

ರಸ್ತೆಯ ಎರಡು ಬದಿಯ ಸ್ಥಳದಲ್ಲಿ ವ್ಯಾ ಪಾರ ಮಾಡುವ ವ್ಯಾಪಾರಿಗಳಿಗೆ ಸಂತೆ ಮಾರುಕಟ್ಟೆ ಒಳಗಡೆ ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಲಾಗಿದ್ದು ವರ್ತಕರು ಹಾಗೂ ಸಾರ್ವಜನಿಕರು ಸಹಕರಿಸಲು ಕೋರಿದೆ.

Related posts

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ಸೇವಾ ಯೋಜನೆಯಿಂದ ನೀರಿನ ಟ್ಯಾಂಕ್ ಕೊಡುಗೆ

Suddi Udaya

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya
error: Content is protected !!