23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರು ಬೃಹತ್ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಆಗಮಿಸಿ ಎ. 17 ರಂದು ನಾಮಪತ್ರ ಸಲ್ಲಿಸಿದರು.

ಗುರುವಾಯನಕೆರೆಯ ಕಿನ್ಯಮ್ಮ ಯಾನೆ ಗುಣವತಿಯಮ್ಮ ಸಭಾ ಭವನದಲ್ಲಿ ಕಾಯ೯ಕತ೯ರ ಸಭೆ ಬಳಿಕ ಅಭ್ಯರ್ಥಿ ರಕ್ಷಿತ್ ಶಿವರಾಂ ಹಾಗೂ ಕಾಂಗ್ರೆಸ್ ನಾಯಕರು ನಗರದಲ್ಲಿ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ. ಪಿ. ಸಿ. ಸಿ ಮಾಧ್ಯಮ ವಕ್ತಾರರಾದ ನಿಕೇತ್ ರಾಜ್ ಮೌರ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಶಾಸಕರಾದ ಕೆ. ವಸಂತ ಬಂಗೇರ, ಕೆ. ಪಿ. ಸಿ. ಸಿ ಸಂಯೋಜಕರಾದ ಶಾಹಿದ್ ತೆಕ್ಕಿಲ್ , ಪ್ರಮುಖರಾದ ಪ್ರತಿಭಾ ಕುಳಾಯಿ, ರಾಜಶೇಖರ ಅಜ್ರಿ, ಕೇಶವ ಗೌಡ ಬೆಳಾಲು,

ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಮೋಹನ್ ಗೌಡ, ಸತೀಶ್ ಕಾಶಿಪಟ್ಣ, ಭಗೀರಥ ಜಿ. , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್, ಹಾಗೂ ರಂಜನ್ ಗೌಡ, ಅಬ್ದುಲ್ ರಹಿಮಾನ್ ಪಡ್ಪು, ಎ.ಸಿ ಮ್ಯಾಥ್ಯೂ, ಲೋಕೇಶ್ವರಿ ವಿನಯಚಂದ್ರ, ಜೆಸಿಂತಾ ಮೋನಿಸ್ ಮತ್ತು ಜಿಲ್ಲಾ ಮಟ್ಟದ ಪಕ್ಷದ ನಾಯಕರುಗಳು ಭಾಗವಹಿಸಿದ್ದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!