ಸಮಾಜ ಮುಖಿ ಚಿಂತನೆಗಳೊಂದಿಗೆ ರಾಷ್ಟ್ರ ಸೇವೆಗೆ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷರಾದ ಯದುಪತಿ ಗೌಡ ಹೇಳಿದರು.
ಅವರು ವಾಣಿ ಶಿಕ್ಷಣ ಸಂಸ್ಥೆಗಳ ಭಾರತ್ ಸ್ಕೌಟ್ ಮತ್ತು ಗೈಡ್ಸ್‌ಗಳ ಆಶ್ರಯದಲ್ಲಿ ಜರಗುವ ಮೂರು ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತ, ವಿದ್ಯಾರ್ಥಿಗಳಲ್ಲಿರುವ ಸೃಜನಾತ್ಮಕ ಚಟುವಟಿಕೆಗಳು ಹಾಗೂ ಪ್ರತಿಭಾನ್ವೇಷನೆಗೆ ಪೂರಕವಾಗಿ ಇಂತಹ ಶಿಬಿರಗಳಲ್ಲಿ ಪಾಲ್ಗೊಳ್ಳುವುದು ಅಗತ್ಯವಿದೆ. ಇದರಿಂದ ಜೀವನದಲ್ಲಿ ಹೊಸತನವನ್ನು ಕಂಡುಕೊಳ್ಳಲು ಕ್ರೀಯಶೀಲರಾಗಲು ಸಾಧ್ಯವಿದೆ ಎಂದರು.
ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾದ್ಯಾಯರಾದ ಲಕ್ಷೀನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಸ್ಥಳಿಯ ಭಾರತ್ ಸ್ಕೌಟ್ ಮತ್ತು ಗೈಡ್ಸ್‌ನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಮೀಳಾ ಧ್ವಜಾರೋಹಣವನ್ನು ನೆರವೇರಿಸಿದರು.
ವಾಣಿ ಕಾಲೇಜಿನ ರೇಂಜರ್‍ಸ್ ಲೀಡರ್ ಶ್ರೀಮತಿ ರಕ್ಷಾ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ ಮತ್ತು ಗೈಡ್ಸ್ ನ ಲೀಡರ್ ಗಳಾದ ಶ್ರೀಮತಿ ಶೋಭಾ ನವೀನ್ ಉಪಸ್ಥಿತರಿದ್ದರು.
ವಾಣಿ ಕಾಲೇಜಿನ ರೋವರ್‍ಸ್ ಲೀಡರ್ ಬೆಳಿಯಪ್ಪ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧಮ್ಯ ಶಾಲೆಯ ಸ್ಕೌಟ್ ಮತ್ತು ಗೈಡ್ಸ್‌ನ ಲೀಡರ್ ಶ್ರೀಮತಿ ಸುಮಲತಾ ಧನ್ಯವಾದ ನೀಡಿದರು. ಕು| ಅರ್ಪಿತಾ ಶೆಟ್ಟಿ ಮತ್ತು ಅಶ್ವಿತಾ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.