24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿರಾಜ್ಯ ಸುದ್ದಿ

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

ಮಂಗಳೂರು: ಪ್ರಚಾರ ಸೇರಿದಂತೆ ಇನ್ನಿತರೆ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷ ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಹಾಗೂ ವಿಶ್ವಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿ.11ರಂದು ಒಪ್ಪಿಗೆ ನೀಡಿದ್ದು, ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಹಾಗೂ ರಕ್ಷಣೆ ಕಾಯಿದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿಸಲಾಗಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯದಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನ ನೀಡಿದೆ. ಈ ನಿಟ್ಟಿನಲ್ಲಿ ಕಾಯಿದೆಯನ್ನು ಉಲ್ಲಂಘಿಸಿ 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಂಡಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya
error: Content is protected !!