ಗುರುವಾಯನಕೆರೆ: ‘ ವಿದ್ಯಾರ್ಥಿಗಳೇ ದೇಶದ ಆಸ್ತಿ. ಪೂರಕವಾದ ವಾತಾವರಣ ದೊರಕಿದರೆ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಲು ಸಾಧ್ಯ. ಅಂಥ ವಾತಾವರಣ ಎಕ್ಸೆಲ್ ವಿದ್ಯಾಸಂಸ್ಥೆಗಳ ಆವರಣದಲ್ಲಿ ಇದೆ ‘ ಎಂದು ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರು ಹೇಳಿದರು. ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ,’ ಅಭಿವಂದನಾ’ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಿದಾಯ ಕೂಟ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಿಶ್ರಾಂತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೆರಾಜೆ ಅವರು ಮಾತನಾಡಿ ‘ ನಿಸರ್ಗ ರಮಣೀಯ ತಾಣದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುತ್ತಿರುವ ಎಕ್ಸೆಲ್ ನ ವಿದ್ಯಾರ್ಥಿಗಳು ಭಾಗ್ಯವಂತರು ‘ ಎಂದು ಕೊಂಡಾಡಿದರು.
ವೇಣೂರು ವಿದ್ಯೋದಯ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಶಿವರಾಮ್ ಹೆಗ್ಡೆಯವರು ದೀಪ ಪ್ರಜ್ವಲನ ಮಾಡಿದರು.
ಇತ್ತೀಚೆಗೆ ಉಜ್ವಲ ಉದ್ಯಮಿ ಪ್ರಶಸ್ತಿ ಪುರಸ್ಕೃತ ರಾದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರನ್ನು ಎಕ್ಸೆಲ್ ಉದ್ಯೋಗಿಗಳು ರಜತ ಫಲಕ ವುಳ್ಳ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯದರ್ಶಿ ಅಭಿರಾಮ್ ಬಿ ಎಸ್ ಅವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು. ದ್ವಿತೀಯ ಪಿಯುಸಿ ಯ ಎಲ್ಲಾ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು. ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಉಪನ್ಯಾಸಕಿ ನಿಶಾ ಪೂಜಾರಿ ಪ್ರಸ್ತಾವನೆಗೈದರು. ಉಪನ್ಯಾಸಕರಾದ ಮೊಹಮ್ಮದ್ ಮುನೀರ್, ಅಂಜನಿ ರಾವ್ ನಿರೂಪಿಸಿದರು. ಆಡಳಿತಾಧಿಕಾರಿ ಪುರುಷೋತ್ತಮ ವಂದಿಸಿದರು.