30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

ಮರೋಡಿ ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ವತಿಯಿಂದ ಸುಬ್ರಹ್ಮಣ್ಯ ಪ್ರಸಾದ್‌ ನೇತೃತ್ವದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯು ಏ.22ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಜರುಗಲಿದೆ.

ಈ ಪ್ರಯುಕ್ತ ರಾತ್ರಿ 7.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮಂಗಳೂರಿನ ಕುದ್ರೋಳಿ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಧಾರ್ಮಿಕ ಉಪನ್ಯಾಸ ನೀಡುವರು. ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸುವರು. ಕಂಬಳ ಕ್ಷೇತ್ರದ ಸಾಧಕ, ಉದ್ಯಮಿ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಸಂಜೆ 4ಗಂಟೆಗೆ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ ಆರಂಭ, 6.30ಕ್ಕೆ ಶ್ರೀ ಉಮಾಮಹೇಶ್ವರ ದೇವರಿಗೆ ರಂಗಪೂಜೆ, ರಾತ್ರಿ 7.30ಕ್ಕೆ ಧಾರ್ಮಿಕ ಸಭೆ, 8 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ, ಪ್ರಸಾದ ವಿತರಣೆ, 8.30ಕ್ಕೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಗೆ ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ (ಅಪ್ಪೆ ಮಂತ್ರದೇವತೆನ ಮೈಮೆನ್‌ ಸಾರುನ ನಾಟಕ) ನಡೆಯಲಿದೆ.

Related posts

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಭೇಟಿ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya
error: Content is protected !!