April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌.

ಈ ವೇಳೆ ಅಶ್ರಫ್ ಆಲಿಕುಂಞಿ ರವರು ಏ.20 ರಂದು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಆಡಳಿತ ಸೌಧದಲ್ಲಿ ಚುನಾವಣಾಧಿಕರಿಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ರಾಮ ಆಚಾರಿ, ಪ್ರಮುಖರಾದ ಹೆಚ್.ಎನ್ ನಾಗರಾಜ್, ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ತಾ. ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya
error: Content is protected !!