April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ


ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 39ನೇ ವರ್ಷಾಚರಣೆ ಪ್ರಯುಕ್ತ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.30ರಂದು ನಡೆಯಲಿರುವ 15ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಎ.23ರಂದು ಪುಂಜಾಲಕಟ್ಟೆ ಬಂಗ್ಲೆ ಮೈದಾನದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ಜರಗಲಿದೆ.

ಈ ಬಾರಿ ಒಟ್ಟು 11 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ಬೆಳ್ತಂಗಡಿ ಲಾಯಿಲ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಕೊಶಾಧಿಕಾರಿ ವಸಂತ ಸುವರ್ಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮೇಲ್ವಿಚಾರಕಿ ಅಶ್ವಿನಿ ಅವರು ಅಧ್ಯಕ್ಷತೆ ವಹಿಸುವರು. ಉದ್ಯಮಿ ನಾಗೇಶ್ ಪ್ರಭು ಅವರು ಮಂಗಳ ವಸ್ತ್ರ ವಿತರಿಸುವರು. ವಿವಿಧ ಕ್ಷೇತ್ರಗಳ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಹಾಗೂ ಅಧ್ಯಕ್ಷ ಪ್ರಶಾಂತ ಪುಂಜಾಲಕಟ್ಟೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಇಂದು (ಜು.17) ಬಳಂಜ ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಇವರ ವತಿಯಿಂದ ತಾಳ ಮದ್ದಳೆ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!