April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕಳೆಂಜ: ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಕು. ಹರ್ಷಿತಾ ರವರಿಗೆ ಅಭಿನಂದನಾ ಸಮಾರಂಭ

ಕಳೆಂಜ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಕು. ಹರ್ಷಿತಾ (ಶೇ.98.16) ರವರಿಗೆ ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಅಭಿನಂದನಾ ಸಮಾರಂಭ ಎ.21 ರಂದು ಕಳೆಂಜ ಗ್ರಾಮದ ನೂಜಿಲ ಮನೆಯಲ್ಲಿ ನಡೆಯಿತು.

ಕಳೆಂಜ ಗ್ರಾಮದ ನೂಜಿಲ ಮನೆ ಸತೀಶ್ ಗೌಡ ಹಾಗೂ ಗೀತಾ ದಂಪತಿ ಪುತ್ರಿ ಕು. ಹರ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 589 ಅಂಕಗಳನ್ನು ಪಡೆದು ಗ್ರಾಮಕ್ಕೆ ಕೀರ್ತಿಯನ್ನು ತಂದಿರುತ್ತಾರೆ. ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅಧ್ಯಕ್ಷತೆ ವಹಿಸಿದ್ದರು.

ಕೌಕ್ರಾಡಿ ಸಂತ ಜಾನರ ಹಿ. ಪ್ರಾ. ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತಾ ಡಿ ಸೋಜ ಅವರು ವಿದ್ಯಾರ್ಥಿನಿಗೆ ಶಾಲು ಹೊದಿಸಿ ಅಭಿನಂದನೆಗಳನ್ನು ಸಲ್ಲಿಸಿದರು. ಅತ್ತ್ಯುತ್ತಮ ಶೈಕ್ಷಣಿಕ ಸಾಧನೆಯಿಂದ ಗ್ರಾಮಕ್ಕೆ ಕೀರ್ತಿ ತಂದ ಸಾಧನೆಗಾಗಿ ಶುಭಾಶಯಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಗೀತಾ, ಸತೀಶ್ ಗೌಡ, ಗ್ರಹಿತ್, ಮಾಯಿಲಪ್ಪ ಗೌಡ ಮುಂತಾದವರು ಉಪಸ್ಥಿತರಿದ್ದರು.

ಹಿರಿಯ ಸದಸ್ಯರಾದ ಜೋಸೆಫ್ ಪಿರೇರಾ ಅವರು ಜೇಸಿ ವಾಣಿ ವಾಚಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಕೆ. ಶ್ರೀಧರ್ ರಾವ್ ಅವರು ಕಾರ್ಯಕ್ರಮ ನಿರೂಪಿಸಿದರು.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya
error: Content is protected !!