ಕೊಕ್ಕಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಕ್ಕಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಿಜ್ಞಾನ, ವಿಭಾಗದಲ್ಲಿ ಒಟ್ಟು 24 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ. 78.94 ಫಲಿತಾಂಶ ಲಭಿಸಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 24 ವಿದ್ಯಾರ್ಥಿಗಳಲ್ಲಿ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇ.83.33 ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಒಟ್ಟು 33 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 1 ವಿದ್ಯಾರ್ಥಿ ಉನ್ನತ ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ದ್ವೀತಿಯ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು, ಕಲಾ ವಿಭಾಗದಲ್ಲಿ ಒಟ್ಟು ಶೇ.76 ಫಲಿತಾಂಶ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ತೃಷಾ ಡಿ.ಎನ್. (523), ರೋಹನ್ (515), ಅಕ್ಷತಾ (504), ಕಲಾ ವಿಭಾಗದಲ್ಲಿ ಆಯಿಷಾ (537), ವರ್ಷಿಣಿ (507), ರಾಜೇಶ್ (499) ಅತೀ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.