ನಡ: 2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಡ ಪದವಿ ಪೂರ್ವ ಕಾಲೇಜಿನ ಕಲಾ ಮತ್ತು ವಾಣಿಜ್ಯ, ವಿಭಾಗದಲ್ಲಿ ಒಟ್ಟು 85 ವಿದ್ಯಾರ್ಥಿಗಳಲ್ಲಿ 77 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.90.58 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಒಟ್ಟು 53 ವಿದ್ಯಾರ್ಥಿಗಳಲ್ಲಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 8 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.94.33 ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಒಟ್ಟು 32 ವಿದ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಕಲಾ ವಿಭಾಗದಲ್ಲಿ ಒಟ್ಟು ಶೇ. 84.37 ಫಲಿತಾಂಶ ಪಡೆದಿದೆ.
ವಾಣಿಜ್ಯ ವಿಭಾಗದಲ್ಲಿ ಫರಹತ್ ರುಕ್ಸಾನ (547), ಫಾತಿಮತ್ ಬರೀರಾ (525), ಸಫೀರಾ (531), ಸುದೀಪ್ ಶೆಟ್ಟಿ (531) ಮಹಮ್ಮದ್ ಆಶಿಕ್ (526), ನಿತೇಶ್ (522), ಶಹೀನಾ ಬಾನು (524), ಸುಭಾಷ್ (513), ಕಲಾ ವಿಭಾಗದಲ್ಲಿ ಆಯಿಷಾತ್ ನಿಶಾ (535), ರಕ್ಷಿತಾ (528), ಸುಹಾನ ಬಾನು (519) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.