
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .