ಉಜಿರೆ:2022-23ನೇ ಸಾಲಿನ ಪದವಿ ಪೂರ್ವ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಒಟ್ಟು 904 ವಿದ್ಯಾರ್ಥಿಗಳಲ್ಲಿ 900 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶೇ.99.55 ಫಲಿತಾಂಶ ಲಭಿಸಿದೆ.
ವಾಣಿಜ್ಯ ವಿಭಾಗದಲ್ಲಿ ಒಟ್ಟು 347 ವಿದ್ಯಾರ್ಥಿಗಳಲ್ಲಿ 346 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 135 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 203 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.99.71 ಫಲಿತಾಂಶ ಪಡೆದಿದೆ.
ವಿಜ್ಞಾನ ವಿಭಾಗದಲ್ಲಿ ಒಟ್ಟು 479 ವಿದ್ಯಾರ್ಥಿಗಳಲ್ಲಿ 478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 228 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 244 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, ತೇರ್ಗಡೆ ಹೊಂದಿದ್ದು, ವಿಜ್ಞಾನ ವಿಭಾಗದಲ್ಲಿ ಒಟ್ಟು ಶೇ.99.79 ಫಲಿತಾಂಶ ಪಡೆದಿದೆ.
ಕಲಾ ವಿಭಾಗದಲ್ಲಿ ಒಟ್ಟು 78 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 10 ವಿದ್ಯಾರ್ಥಿಗಳು ಉನ್ನತಶ್ರೇಣಿಯಲ್ಲಿ, 48 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಕಲಾ ವಿಭಾಗದಲ್ಲಿ ಶೇ.97.44 ಫಲಿತಾಂಶ ಪಡೆದಿದೆ.