ಬೆಳ್ತಂಗಡಿ : 2022- 23ನೇ ಸಾಲಿನ ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಶೇ.98.31 ಫಲಿತಾಂಶ ಲಭಿಸಿದೆ. ವಾಣಿ ಪದವಿ ಪೂರ್ವ ಕಾಲೇಜಿನಿಂದ ಒಟ್ಟು 416 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ವಿಜ್ಞಾನ ವಿಭಾಗದಲ್ಲಿ 167 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ವಿಜ್ಞಾನ ವಿಭಾಗದಲ್ಲಿ ಗ್ರೀಷ್ಮ ವಿ ಎಂ ಮತ್ತು ಸಪ್ನಾ ಎಸ್ ಎಂ 586 ಅಂಕ ಗಳಿಸುವುದರೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ 10ನೇ ಸ್ಥಾನ ಗಳಿಸಿರುತ್ತಾರೆ. ಕೆ ಎಸ್ ಆನಘ 584 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ, ಪ್ರತಿಕ್ಷ ಮತ್ತು ಸಾತ್ವಿಕ್ ಎಲ್ ಕೆ 579 ಅಂಕ ಗಳಿಸಿ ಕಾಲೇಜಿಗೆ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಕಲಾ ವಿಭಾಗದಲ್ಲಿ 24 ವಿದ್ಯಾರ್ಥಿಗಳು ಹಾಜರಾಗಿದ್ದು 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಯಲ್ಲಿ ಉತ್ತಿರ್ಣ ರಾಗಿದ್ದಾರೆ. ಕಲಾ ವಿಭಾಗದಲ್ಲಿ ಅಮೃತ 560 ಅಂಕಗಳೊಂದಿಗೆ ಪ್ರಥಮ ಸ್ಥಾನ. ಅನುಷಾ ಮತ್ತು ಕನ್ನಿಕಾ 552 ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಅಂದಾಜು 542 ಅಂಕದೊಂದಿಗೆ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ವಾಣಿಜ್ಯ ವಿಭಾಗದಲ್ಲಿ 225 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 89 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ವಾಣಿಜ್ಯ ವಿಭಾಗದಲ್ಲಿ ಕುಮಾರಿ ರಕ್ಷಿತಾ 591 ಅಂಕಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ 10ನೇ ಸ್ಥಾನ ಗಳಿಸಿರುತ್ತಾರೆ.
ಹರ್ಷಿತಾ 589 ಅಂಕದೊಂದಿಗೆ ದ್ವಿತೀಯ ಸ್ಥಾನ ಮತ್ತು ರಾಮಕೃಷ್ಣ ಶರ್ಮ 586 ಅಂಕದೊಂದಿಗೆ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.