24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಶ್ರೀ ಕ್ಷೇತ್ರ ಧರ್ಮಸ್ಥಳ, ಶ್ರೀರಾಮ ಕ್ಷೇತ್ರ, ಕಾಜೂರು ದಗಾ೯ಕ್ಕೆ ಭೇಟಿ

ಬೆಳ್ತಂಗಡಿ: ಜೆಡಿಎಸ್ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಚುನಾವಣೆಯ ನಿಮಿತ್ತ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ‌ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು, ಸಹೋದರ ಡಿ‌ ಹರ್ಷೇಂದ್ರ ಕುಮಾರ್ ಅವರನ್ನು, ಶ್ರೀರಾಮ ಕ್ಷೇತ್ರದ ಪೀಠಾಧಿಪತಿಗಳಾದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು, ಅಸ್ಸಯ್ಯಿದ್ ಕಾಜೂರು ತಂಙಳ್ ಅವರನ್ನು, ಬೇಟಿ ಮಾಡಿದರು.

ಕಾಜೂರು ದರ್ಗಾಶರೀಫ್ ನಲ್ಲಿ ಚಾದರ ಅರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧರ್ಮಸ್ಥಳ ಭೇಟಿಯ ವೇಳೆ ಅಭ್ಯರ್ಥಿ ಕಡೆಯಿಂದ ಪೂಜ್ಯ ಹೆಗ್ಗಡೆಯವರನ್ನು, ಕನ್ಯಾಡಿ ಸ್ವಾಮೀಜಿಯವರನ್ನು ಶಾಲು ಹೊದೆಸಿ ಗೌರವಿಸಲಾಯಿತು. ಶ್ರೀರಾಮ ಕ್ಷೇತ್ರದಲ್ಲಿ ಸ್ವಾಮೀಜಿಯವರು ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರನ್ನು ಸನ್ಮಾನಿಸಿ ಮಾರ್ಗದರ್ಶನ ನೀಡಿದರು.

ಪಕ್ಷದ ಕಾರ್ಯಾಧ್ಯಕ್ಷ ರಾಮ ಆಚಾರಿ, ಸಂ.ಕಾರ್ಯದರ್ಶಿ ಹೆಚ್.ಎನ್ ನಾಗರಾಜ್, ಅಲ್ಪಸಂಖ್ಯಾತ ಘಟಕದ ಪ್ರ. ಕಾರ್ಯದರ್ಶಿ ಶಾಹಿದ್ ಪಾದೆ, ಮಹೇಶ್ ಪಿ.ಜಿ ಉಜಿರೆ ಉಪಸ್ಥಿತರಿದ್ದರು

Related posts

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya
error: Content is protected !!