24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ತರಗತಿಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಭರದಿಂದ ಆರಂಭಗೊಂಡಿವೆ.
ಏಪ್ರಿಲ್ 21 ರಂದು ಕರ್ನಾಟಕ ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು ಚುರುಕುಗೊಂಡಿವೆ.
ರಾಷ್ಟ್ರೀಯ ಮೌಲ್ಯಂಕನ ಪರಿಷತ್ತು ನ್ಯಾಕ್ ಸಂಸ್ಥೆಯಿಂದ ಸತತ 4ನೇ ಬಾರಿಗೆ A++ ಮಾನ್ಯತೆಯನ್ನ ಗಳಿಸಿದ ಶ್ರೇಷ್ಠ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಉಜಿರೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸಾಂಸ್ಕೃತಿಕ , ಕ್ರೀಡಾ ಚಟುವಟಿಕೆಗಳು, ತರಬೇತಿ , ಸಂಶೋಧನೆ ಹಾಗೂ ಉದ್ಯೋಗಗಳಿಗೆ ಪೂರಕವಾದ ನಿರಂತರ ತರಬೇತಿಯನ್ನು ನೀಡಲಾಗುತ್ತಿದೆ.
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರದಲ್ಲಿಯೇ ವಿಶಿಷ್ಟ ಮಾನ್ಯತೆ ಪಡೆದಿರುವ ಈ ಕಾಲೇಜಿನ ಸೌಲಭ್ಯಗಳನ್ನ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ್ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಯಶಸ್ವಿ ದ್ವಿತೀಯ ಸ್ಥಾನ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya
error: Content is protected !!