23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಎ.22 ರಂದು ಆಯೋಜಿಸಿದ್ದ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಭಾಗವಹಿಸಿದ್ದರು.

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರದೀಶ್ ಮರೋಡಿ, ಕರ್ನಾಟಕ ಕೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಮರೋಡಿ, ಅಕ್ಷರ ಸಿರಿ ಪ್ರಶಸ್ತಿ ಪುರಸ್ಕೃತ ಬಂದಾರು ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಸುಬ್ರಹ್ಮಣ್ಯ ಪ್ರಸಾದ್ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ, ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಿತು.

ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

ಗಣೇಶ್ ಬಿ. ಕಾರ್ಯಕ್ರಮ ನಿರೂಪಿಸಿದರು. ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.

Related posts

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!