37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

ಮರೋಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು.

ಮರೋಡಿ ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಇದರ ವತಿಯಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ಎ.22 ರಂದು ಆಯೋಜಿಸಿದ್ದ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆಯ ಪ್ರಯುಕ್ತ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಉಪನ್ಯಾಸ ನೀಡಿದರು.

ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಗೌರವಾಧ್ಯಕ್ಷ ಯಶೋಧರ ಬಂಗೇರ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಸರ ವಿಜಯ ಆರಿಗ, ಶಿರ್ತಾಡಿ ಪ್ರಭಾ ಕ್ಲಿನಿಕ್‌ನ ಡಾ.ಆಶೀರ್ವಾದ್‌, ಪ್ರಗತಿಪರ ಕೃಷಿಕ ರವೀಂದ್ರ ಹೆಗ್ಡೆ ಉಚ್ಚೂರು, ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ ಇದರ ಅಧ್ಯಕ್ಷ ರಾಘವ ಪೂಜಾರಿ, ಯುವ ಉದ್ಯಮಿ ದಿನೇಶ್‌ ಬುಣ್ಣಾನ್ ಇಸ್ರೇಲ್‌ ಭಾಗವಹಿಸಿದ್ದರು.

ಕಂಬಳ ಕ್ಷೇತ್ರದ ಸಾಧಕ ಇರುವೈಲು ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಪ್ರದೀಶ್ ಮರೋಡಿ, ಕರ್ನಾಟಕ ಕೀಡಾರತ್ನ ಪ್ರಶಸ್ತಿ ಪುರಸ್ಕೃತ ಕಂಬಳ ಓಟಗಾರ ಶ್ರೀಧರ ಮರೋಡಿ, ಅಕ್ಷರ ಸಿರಿ ಪ್ರಶಸ್ತಿ ಪುರಸ್ಕೃತ ಬಂದಾರು ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಸುಬ್ರಹ್ಮಣ್ಯ ಪ್ರಸಾದ್ ಅವರ ಪೌರೋಹಿತ್ಯದಲ್ಲಿ ಕಲಶ ಪ್ರತಿಷ್ಠೆ, ಶ್ರೀ ಶನೈಶ್ವರ ಪೂಜೆ, ಉಮಾಮಹೇಶ್ವರ ದೇವರಿಗೆ ರಂಗಪೂಜೆ ನಡೆಯಿತು.

ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಉಮೇಶ್‌ ಮಿಜಾರ್‌ ಸಾರಥ್ಯದ ನಮ್ಮ ಕಲಾವಿದೆರ್‌ ಬೆದ್ರ ಇವರಿಂದ ‘ಕುಸಲ್ದ ಗೊಬ್ಬು’ ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಂಡಿತು.

ಗಣೇಶ್ ಬಿ. ಕಾರ್ಯಕ್ರಮ ನಿರೂಪಿಸಿದರು. ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ನ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.

Related posts

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!