ಉಜಿರೆ ಗ್ರಾಮದ ಬೆಳಾಲಿನ ಮಾಚಾರು ಗೋಪಾಲ ನಾಯ್ಕ ಅವರು ಜಾನಪದ ಕವಿಯಾಗಿ ಪ್ರಸಿದ್ಧಿ ಪಡೆದವರು. ಹಲವು ಸಂಧಿ ಪಾಡ್ದನಗಳ ಕಣಜ ಎಂದು ಪ್ರಖ್ಯಾತರಾಗಿದ್ದರು. ಜಾನಪದ ಲೋಕಕ್ಕೆ ಅವರ ಕೊಡುಗೆ ಹಿರಿದಾದುದು. ಅವರ ಅಗಲುವಿಕೆ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.
ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರ ಆತ್ಮಕ್ಕೆ ಸದ್ಗತಿ ದೊರೆಯಲೆಂದು ಮತ್ತು ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.