25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಬೆಳ್ತಂಗಡಿ: ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ವರ್ಷ ನಡೆಯುವ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮೇ 3 ರಂದು ಬುಧವಾರ ಸಂಜೆ 6.50 ರ ಗೋಧೋಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.
ಈ ಬಾರಿಯ ವಿವಾಹ ಸಮಾರಂಭದಲ್ಲಿ ದೇಶದ ಹಾಗೂ ವಿವಿಧ ರಾಜ್ಯಗಳ ಸುಮಾರು 190 ಜೋಡಿ ವಧು-ವರರು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ, 200 ಜೋಡಿಯವರೆಗೆ ಬರುವ ಸಾಧ್ಯತೆಯಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಈ ಪೈಕಿ ಸುಮಾರು 190 ಜೋಡಿಗಳ ದಾಖಲೆಗಳನ್ನು ಪರಿಶೀಲಿಸಿ ಅಂತಿಮಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಿ ಬಾಸ್ ಖ್ಯಾತಿಯ ಚಲನಚಿತ್ರ ನಟ ದರ್ಶನ್ ತೂಗುದೀಪ ಅವರು ಭಾಗವಹಿಸಲಿದ್ದು ವಿಶೇಷ ಆಕರ್ಷಣೆಯಾಗಿದೆ. ಅಲ್ಲದೆ ನಾಡಿನ ಗಣ್ಯರು, ಜನಪ್ರತಿನಿಧಿಗಳು, ಹೆಗ್ಗಡೆ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

Related posts

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದ ಮಾಜಿ ಶಾಸಕ ಕೆ. ವಸಂತ ಬಂಗೇರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!