April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಕಳೆಂಜ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಎ. 26 ರಂದು ಕಳೆಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡರು.

ಕಾಂಗ್ರೆಸ್‌ ಕಾರ್ಯಕರ್ತರಾದ ಬಾಲಕೃಷ್ಣ ಉದ್ಲಾಜೆ, ಎಜೆ ಜೋಸೆಫ್ ಕಾಯದ, ಸಿಬಿನ್ ಎಕ್ ಅವರನ್ನು ಶಾಸಕ ಹರೀಶ್ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿಗೆ ಬರಮಾಡಿಕೊಂಡರು.

ಈ ವೇಳೆ ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯೋಗೀಶ್ ಅಲಂಬಿಲ, ಕಳೆಂಜ ಶಕ್ತಿ ಕೇಂದ್ರದ ಅಧ್ಯಕ್ಷ ಹರೀಶ್ ಕೆ.ಬಿ. ಕೊಯ್ದ, ಕಳೆಂಜ ಶಕ್ತಿಕೇಂದ್ರದ ಚುನಾವಣಾ ಪ್ರಭಾರಿ ಧನಂಜಯ್‌ ಗೌಡ, ಕಳೆಂಜ ಪಂಚಾಯತ್ ಅಧ್ಯಕ್ಷರಾದ ಎ.ಪಿ. ಪ್ರಸನ್ನ ಮತ್ತು ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!