23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

ಮುಂಡಾಜೆ ವಿವೇಕಾನಂದ ವಿದ್ಯಾಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಧ್ಯಾಪಕರಿಗೆ ಗುರುವಂದನೆ ಸಲ್ಲಿಸಲಾಯಿತು.

ಶಾಲೆಯ ಆರಂಭದಿಂದ ಅಧ್ಯಾಪಕರುಗಳಾಗಿದ್ದ ವೀರೇಶ್ವರ ವಿ ಫಡಕೆ, ರಾಧಾಕೃಷ್ಣ ಕೆ, ಸುಗುಣ ಎಸ್ ಭಟ್, ಬಾಬುಗೌಡ, ಪದ್ಮನಾಭ ಪಟವರ್ಧನ್, ಕೆ. ರಾಮ ಕಾರಂತ, ಚಂದ್ರಶೇಕರ. ಬಿ , ಶ್ರೀಮತಿ ದೇವಕಿ ಇವರನ್ನು ಗೌರವಿಸಲಾಯಿತು.

ಸಮಾರಂಭದ ವಿಶೇಷ ಅಹ್ವಾನಿತರಾಗಿ ರೊ. ಮಚ್ಚಿಮಲೆ ಅನಂತ ಭಟ್ ಭಾಗವಹಿಸಿದ್ದರು. ವಿವೇಕಾನಂದ ವಿದ್ಯಾಸಂಸ್ಥೆ ಪುತ್ತೂರು ಇಲ್ಲಿನ ಅಧ್ಯಕ್ಷರಾದ ಕಲ್ಲಡ್ಕ ಡಾ| ಪ್ರಭಾಕರ ಭಟ್ ಮಾತನಾಡಿ ಶೈಕ್ಷಣಿಕ ವಿದ್ಯೆಯ ಜೊತೆಗೆ ನೈತಿಕ ಶಿಕ್ಷಣ ನೀಡುವುದು ನಮ್ಮ ಸಂಸ್ಥೆಯ ಉದ್ದೇಶವಾಗಿದೆ ಎಂದು ತಿಳಿಸಿದರು. ಹಾಗೂ ಹಿರಿಯ ವಿದ್ಯಾರ್ಥಿಗಳು ಗುರುಗಳನ್ನು ಗೌರವಿಸುವ ಈ ಅಭೂತಪೂರ್ವ ಕಾರ್ಯಕ್ರಮದ ಬಗ್ಗೆ ಅಭಿನಂದನೆ ಸಲ್ಲಿಸಿದರು. ಈ ಶಾಲೆ ನಡೆದು ಬಂದ ದಾರಿಯ ಬಗ್ಗೆ ನಿವೃತ್ತ ಶಿಕ್ಷಕ ಕೆ. ರಾಧಾಕೃಷ್ಣರವರು ಮಾತನಾಡಿ ಭಾರತೀಯ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಸಮಾಜದ ಉತ್ತಮ ಪ್ರಜೆಯಾಗಿ ಬಾಳುವುದು ನಮ್ಮೆಲ್ಲರ ಹೊಣೆ ಹಾಗೂ ಈ ಕೆಲಸವನ್ನು ಶಾಲಾ ಅಧ್ಯಾಪಕರುಗಳು ಮಾಡಬೇಕೆಂದು ಸಲಹೆ ನೀಡಿದರು.

ಗುರುವಂದನೆ ಕಾರ್ಯಕ್ರಮದ ಮೂಲಕ ಹಿರಿಯ ವಿದ್ಯಾರ್ಥಿಗಳು ತೋರಿದ ಪ್ರೀತಿಗೆ ನಾವೆಲ್ಲ ಆಭಾರಿಗಳು ಎಂದು ವೀರೇಶ್ವರ ವಿ. ಫಡ್ಕೆ ಹೇಳಿದರು. ಸುಮಾರು 150 ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿ ಸಂಭ್ರಮಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಜೆ ವೆಂಕಟೇಶ್ವರ ಭಟ್ ಅಧ್ಯಕ್ಷತೆ ವಹಿಸಿದ್ದರು.

ಮುಂಡಾಜೆ ವಿವೇಕಾನಂದ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ. ವಿನಯಚಂದ್ರ ಉಪಸ್ಥಿತರಿದ್ದರು.

ಹಿರಿಯ ವಿದ್ಯಾರ್ಥಿ ನಾರಾಯಣ ಫಡಕೆ ಮತ್ತು ಜಯರಾಮ. ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!