32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಪುಂಜಾಲಕಟ್ಟೆ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ, ಭಾರತೀಯ ಯುವ ರೆಡ್ ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೆಂಜರ್ಸ್, ಹಳೆ ವಿದ್ಯಾರ್ಥಿ ಸಂಘ, ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಎ. 26 ರಂದು ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರಾದ ಟಿ.ಕೆ ಶರತ್ ಕುಮಾರ್ ವಹಿಸಿದ್ದರು., ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ರೋಟರಿ ಕ್ಲಬ್ ಶ್ರೀ ಹರ್ಷ ನಾರಾಯಣ ಶೆಟ್ಟಿ ನೆರವೇರಿಸಿದರು. ರಕ್ತದಾನದ ಕುರಿತು ಜಾಗೃತಿ ಮೂಡಿಸುದರ ಫಲವಾಗಿ ಭಿತ್ತಿ ಪತ್ರವನ್ನು ಅನಾವರಣ ಗೊಳಿಸಲಾಯಿತು.

ಮುಖ್ಯ ಅತಿಥಿಗಳಾಗಿ ಆಂಟೋನಿ ಇವರು ರಕ್ತದಾನದ ಜಾಗೃತಿಯ ಕುರಿತು ಮಾತುಗಳನ್ನಾಡಿದರು. ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಕ್ರಿಯವಾಗಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನವನ್ನು ಮಾಡಿದರು. 87 ಯೂನಿಟ್ ರಕ್ತದಾನವನ್ನು ಸ.ಪ್ರ.ದರ್ಜೆ ಕಾಲೇಜು ಪುಂಜಾಲಕಟ್ಟೆಯಿಂದ ನೀಡಲಾಯಿತು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!