September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

ಪುಂಜಾಲಕಟ್ಟೆ :ಪುಂಜಾಲಕಟ್ಟೆ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಬೈಕ್‌ ಸವಾರನೋರ್ವ ಮೃತಪಟ್ಟು,ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಸಂದೀಪ್ ಲೋಬೊ ಮೃತಪಟ್ಟ ಯುವಕ

ಅಮ್ಮಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿಸಿರೋಡಿನಿಂದ ಪುಂಜಾಲಕಟ್ಟೆ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಓವರ್ ಟೇಕ್ ಮಾಡಿಕೊಂಡು ಅತೀ ವೇಗದಲ್ಲಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಿಂದ ಗಾಯಗೊಂಡಿದ್ದ ಸಂದೀಪ್ ಲೋಬೋ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದು, ಆಕಾಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya
error: Content is protected !!