26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

ಮಿತ್ತಬಾಗಿಲು: ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಧಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವಿನಲ್ಲಿ ನಡೆದಿದೆ.

ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಮನೆಯ ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ
ಮೇಸ್ತ್ರಿ ಕೆಲಸ ಮಾಡುತ್ತಿದ್ದ, ಹರೀಶ್ (30ವ) ಸಾವನ್ನಪ್ಪಿದ ದುರ್ಧೈವಿ.

ಘಟನೆ ವಿವರ: ಕಳೆದ ಶುಕ್ರವಾರ ಎ.21ರಂದು ಹರೀಶ್ ನಾರಾಯಣ ಕುಂಬಾರ ಎಂಬವರಿಗೆ ಸೇರಿದ ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ತಲೆಯ ಮಧ್ಯೆ ಭಾಗಕ್ಕೆ ಗಂಭೀರ ಗಾಯಗೊಂಡರೆನ್ನಲಾಗಿದೆ.
ಅವರನ್ನು ಕೂಡಲೇ ಉಜಿರೆಯ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಒಂದು ವಾರ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ ಎ.28 ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹರೀಶ್ ರವರು ಮೇಸ್ತ್ರಿ ಕೆಲಸದಲ್ಲಿ ಪ್ರಾಮಾಣಿಕತೆ ಕಾಪಾಡಿ ಎಲ್ಲರಲ್ಲಿಯೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ತಂದೆ ಲಕ್ಷ್ಮಣ ಕುಂಬಾರ, ತಾಯಿ ಕುಸುಮಾವತಿ, ಪತ್ನಿ, ಒಂದೂವರೆ ವರ್ಷದ ಮಗು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!