September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

ಮಿತ್ತಬಾಗಿಲು: ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಧಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಾವಿನಲ್ಲಿ ನಡೆದಿದೆ.

ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಮನೆಯ ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ
ಮೇಸ್ತ್ರಿ ಕೆಲಸ ಮಾಡುತ್ತಿದ್ದ, ಹರೀಶ್ (30ವ) ಸಾವನ್ನಪ್ಪಿದ ದುರ್ಧೈವಿ.

ಘಟನೆ ವಿವರ: ಕಳೆದ ಶುಕ್ರವಾರ ಎ.21ರಂದು ಹರೀಶ್ ನಾರಾಯಣ ಕುಂಬಾರ ಎಂಬವರಿಗೆ ಸೇರಿದ ಮನೆಯ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ತಲೆಯ ಮಧ್ಯೆ ಭಾಗಕ್ಕೆ ಗಂಭೀರ ಗಾಯಗೊಂಡರೆನ್ನಲಾಗಿದೆ.
ಅವರನ್ನು ಕೂಡಲೇ ಉಜಿರೆಯ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಒಂದು ವಾರ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ ಎ.28 ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹರೀಶ್ ರವರು ಮೇಸ್ತ್ರಿ ಕೆಲಸದಲ್ಲಿ ಪ್ರಾಮಾಣಿಕತೆ ಕಾಪಾಡಿ ಎಲ್ಲರಲ್ಲಿಯೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ತಂದೆ ಲಕ್ಷ್ಮಣ ಕುಂಬಾರ, ತಾಯಿ ಕುಸುಮಾವತಿ, ಪತ್ನಿ, ಒಂದೂವರೆ ವರ್ಷದ ಮಗು, ಸಹೋದರರು, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!