April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.

ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಕ್ಷೇಮವನ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಲೇಜಿನ ಇನ್ನೋರ್ವ ಹಿರಿಯ ವಿದ್ಯಾರ್ಥಿ, ನಾವೂರಿನ ಆರೋಗ್ಯ ಕ್ಲಿನಿಕ್ ನ ವೈದ್ಯ ಡಾ. ಪ್ರದೀಪ್ ಎ. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

11.30ರಿಂದ ಸಂಘದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ ಹಾಗೂ ಪರಸ್ಪರ ಸಂವಾದ ಕಾರ್ಯಕ್ರಮ ನಡೆಯಲಿದೆ.

ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಕಾರ್ಯಕ್ರಮ ಸಂಘಟಕರು ಮನವಿ ಮಾಡಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನೂತನ ಸಮಿತಿ ರಚನೆ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!