March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ಮಾಡಿ ಮಾತ್ನಾಡಿದ ಬಂಗೇರರು, ತಾಲೂಕಿನ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು. ಡಿಸಿಸಿ ಅಧ್ಯಕ್ಷರಾದ ಹರೀಶ್ ಕುಮಾರ್ ಮಾತ್ನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಬೇಕಾದರೆ ರಕ್ಷಿತ್ ಶಿವರಾಂ ಗೆಲ್ಲಬೇಕು. ಕರಾವಳಿ ಜಿಲ್ಲೆಗಳಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಅದು ಬೆಳ್ತಂಗಡಿ ತಾಲೂಕುನಿಂದಲೇ ಶುರುವಾಗಲಿದೆ. ಮತಯಾಚನೆ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶೇಖರ್ ಕುಕ್ಯಾಡಿ, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಸುಶೀಲಾ, ಕುಕ್ಯಾಡಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪದ್ಮನಾಭ್ , ಪಡಂಗಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮ್ಯಾಕ್ಸಿನ್ ಕ್ರಾಸ್ದ, ಬಳಂಜೆ ಪಂಚಾಯಿತಿ ಸದಸ್ಯರು ರವೀಂದ್ರ ಬಿ ಅಮೀನ್, ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Related posts

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
error: Content is protected !!