September 6, 2026
Uncategorized

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಮತ್ತು ಎಸ್.ಡಿ.ಎಂ. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿಧ್ಯಾರ್ಥಿಗಳ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ ಅಂಗವಾಗಿ ಉಜಿರೆಯ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್. ಇವರು ಧ್ವಜಾರೋಹಣ ನೆರವೇರಿಸಿದರು.

ನಂತರ ಧರ್ಮಸ್ಥಳ ಮಂಜುನಾಥೇಶ್ವರ ಪಿ.ಯು ಕಾಲೇಜ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಹಾಯಕ ಚುನಾವಣಾಧಿಕಾರಿ ಹಾಗೂ ತಹಶೀಲ್ದಾರ್ ಸುರೇಶ್ ಕುಮಾರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಆಫೀಸರ್, ತಾಲೂಕು ಪಂಚಾಯತ್ ಸಿಬ್ಬಂದಿಗಳು ಮತ್ತು ಉಜಿರೆ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಸಿಬ್ಬಂದಿಗಳು, ಬೂತ್ ಮಟ್ಟದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಕಾಂಗ್ರೆಸ್‌’ಗೆ ಗೆಲುವಿನ ಗ್ಯಾರಂಟಿ ನೀಡಿದ ಜನತೆ ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ: ಬಸ್ ಗೆ ಡಿಕ್ಕಿ ಹೊಡೆದು ಧರೆಗೆ ಗುದ್ದಿ ಪಲ್ಟಿಯಾದ ಕಾರು

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya
error: Content is protected !!