31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

ಮಚ್ಚಿನ: ಶ್ರೀ ಸತ್ಯ ಚಾವಡಿ ಮಾನ್ಯ, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ, ಮಡಾವು ಇದರ ಆಡಲಕಿತ ಮೊಕ್ತೇಸರ ಮೋನಪ್ಪ ಪೂಜಾರಿ ಕಂಡೆತ್ಯಾರು ಹಸಿರುವಾಣಿ ಹೊರೆಕಾಣಿಕೆಗೆ ಚಾಲನೆ ನೀಡಿ ಶುಭ ಕೋರಿದರು.

ಹಸಿರುವಾಣಿ ಮತ್ತು ದೈವಗಳ ಮೊಗಮೂರ್ತಿಯನ್ನು ಚೆಂಡೆ, ಕೀಲುಕುದುರೆ, ವಾದ್ಯಘೋಷ ಮತ್ತು, ಬೆಳಾಲು ಶ್ರೀ ಅನಂತಪದ್ಮನಾಭ ಮಹಿಳಾ ಭಜನಾ ತಂಡದ ಕುಣಿತ ಭಜನೆಯೊಂದಿಗೆ ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂದಿರದಿಂದ ಭವ್ಯ ಮೆರವಣಿಗೆಯಲ್ಲಿ ಮಾನ್ಯ ತರವಾಡು ಮನೆಗೆ ತರಲಾಯಿತು.

ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಕುಕ್ಕಾಜೆ ಮಾಣಿಲ ಶ್ರೀ ಕಾಳಿಕಾಂಬಾ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಆಶೀರ್ವಚನ ನೀಡಿದರು.

ಶ್ರೀಧರ್ ರಾವ್ ಪೇಜಾವರ, ಪ್ರಧಾನ ಅರ್ಚಕರು, ಶ್ರೀ ಮಹಿಷಮರ್ದಿನಿ ದೇವಸ್ಥಾನ ಪಾರೆಂಕಿ, ಮಡಂತ್ಯಾರು
ಪ್ರಜ್ವಲನೆಯೊಂದಿಗೆ ಧಾರ್ಮಿಕ ಉಪನ್ಯಾಸ ನೀಡಿದರು.

ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನ, ಕಜೆಕಾರುವಿನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಣಶೇಖರ್ ಸಭಾಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಪುಂಜಾಲಕಟ್ಟೆ ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಶಾಂತ್ ಕೆ,ಮಂಗಳೂರು ನೀರುಮಾರ್ಗ ದೀಪಲಹರಿ ಲಕ್ಷ್ಮಣ ಪೂಜಾರಿ, ಗ್ರಾಮ ದೈವದ ಪೂಜಾರಿ ಸದಾನಂದ ಪೂಜಾರಿ ಕುರುಡಂಗೆ,ಧಾರ್ಮಿಕ ಧತ್ತಿ ಇಲಾಖೆಯ ಅಧೀಕ್ಷಕಿ ಶ್ವೇತಾ, ಕುಟುಂಬದ ಹಿರಿಯರಾದ ಸಂಜೀವ ಪೂಜಾರಿ ಮಾನ್ಯ,ಆಡಳಿತ ಮಂಡಳಿ ಗೌರವಾಧ್ಯಕ್ಷ ದಿನಕರ ಪೂಜಾರಿ ಕಡ್ತಿಲ,ಆಡಳಿತ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ ಕಡ್ತಿಲ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಭೋಜ ಬಂಗೇರ ಮಾನ್ಯ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಸಿ.ಹೆಚ್.ಚಿಪ್ಲುಕೋಟೆ,ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಪೂಜಾರಿ ಕಡ್ತಿಲ,ಕೋಶಾಧಿಕಾರಿ ಪೂರ್ಣೀಮಾ ಕೋಟ್ಯಾನ್, ಆಡಳಿತ ಮಂಡಳಿ ಕಾರ್ಯದರ್ಶಿ ವಿನಯಚ್ಚಂದ್ರ ಜೆಂಕ್ಯಾರು, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಪೂಜಾರಿ ಕಡ್ತಿಲ, ಪವಿತ್ರ ಕೋಟ್ಯಾನ್ ಉಪಸ್ಥಿತರಿದ್ದರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಸರಕಾರಿ ಪ. ಪೂ. ಕಾಲೇಜಿನಲ್ಲಿ “ಮಳೆ ನೀರು ಕೊಯ್ಲು ಹಾಗೂ ಮರುಪೂರಣ ಇದರ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
error: Content is protected !!