April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿಯ ವಿನು ಬಳಂಜ ನಿರ್ದೆಶನದ ‘ಬೇರ’ ಚಲನಚಿತ್ರದ ಟೀಸರ್ ನ್ನು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಎ.30 ರಂದು ಬಿಡುಗಡೆಗೊಳಿಸಿದರು.

ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರು ಇದೀಗ ಕಿರುತೆರೆ ನಿರ್ದೇಶಕ ವಿನು ಬಳಂಜ ನಿರ್ದೇಶನದ ಮೊದಲ ಚಿತ್ರ ‘ಬೇರ’ಗೆ ಸಾಥ್ ನೀಡಿದ್ದಾರೆ. ವಿಭಿನ್ನ ಕಥೆ ಆಧಾರಿಸಿರೋ ‘ಬೇರ’ ಚಿತ್ರದ ಟೀಸರ್ ಅನ್ನು ಶಿವರಾಜ್ ಕುಮಾರ್ ಬಿಡುಗಡೆ ಮಾಡುವ ಮೂಲಕ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ವಿನು ಬಳಂಜ ಮಾತನಾಡಿ ಕಳೆದ ನಾಲ್ಕೈದು ವರ್ಷ ನಾನು ವೈಯಕ್ತಿಕ ಕಾರಣದಿಂದ ಕಿರುತೆರೆ ಹಾಗೂ ಹಿರಿತೆರೆಯಿಂದ ದೂರವಿದ್ದೆ. ಆನಂತರ ಒಂದು ಮ್ಯೂಸಿಯಂ ಗೆ ಹೋದೆ. ಅಲ್ಲೇ ಈ ಕಥೆ ಹುಟ್ಟಿದ್ದು, ಬಳಿಕ ಮತ್ತೆ ನನ್ನನ್ನು ಸಿನಿಮಾ ಮಾಡಲು ಪ್ರೇರೇಪಿಸಿದ್ದು ನಿರ್ಮಾಪಕ ದಿವಾಕರ್. ತುಳುವಿನಲ್ಲಿ ‘ಬೇರ’ ಎಂದರೆ ಕನ್ನಡದಲ್ಲಿ ವ್ಯಾಪಾರ ಎಂದು ಅರ್ಥ ಎಂದು ತಿಳಿಸಿದರು.


ವಿನು ಬಳಂಜ ಅವರ ನಿರ್ದೇಶನದಲ್ಲಿ ಕೆಲಸ ಮಾಡಿದ ಖುಷಿಯಿದೆ. ನಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ಚಿತ್ರದಲ್ಲಿ ನಟಿಸಿರುವ ದತ್ತಣ್ಣ, ಯಶ್ ಶೆಟ್ಟಿ, ಹರ್ಷಿಕಾ ಪೂಣಚ್ಛ ಅಶ್ವಿನ್ ಹಾಸನ್, ಚಿತ್ಕಲ ಬಿರಾದಾರ್, ಮಂಜುನಾಥ್ ಹೆಗಡೆ, ಗುರು ಹೆಗಡೆ, ರಾಕೇಶ್ ಮಯ್ಯ, ಧವಳ್ ದೀಪಕ್ ಮುಂತಾದವರು ಹೇಳಿದರು.

ಈ ಸಂದರ್ಭದಲ್ಲಿ ಛಾಯಾಗ್ರಹಕ ರಾಜಶೇಖರ್ ಹಾಗೂ ಕಾರ್ಯಕಾರಿ ನಿರ್ಮಾಪಕ ರಾಮದಾಸ ಶೆಟ್ಟಿ , ನಿರ್ಮಾಪಕ ದಿವಾಕರ ದಾಸ ಉಪಸ್ಥಿತರಿದ್ದರು.

Related posts

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!