ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಕಡೆ ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿಯ ಯಶಸ್ಸನ್ನು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆ ಕೈಜೋಡಿಸುತ್ತಿದ್ದಾರೆ.
ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮತದಾರರು ಉಪಸ್ಥಿತರಿದ್ದು, ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕಾರ್ಯಗಳಿಗೆ ಮೆಚ್ಚಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್ ಮುಖಂಡರಾದ ಶಾಜನ್ ಟಿ.ಟಿ ಕಾಂಜಾಲ್ ಮತ್ತು ಲಕ್ಷ್ಮಣ್ ಜಿ. ಎಸ್ ಅವರು ಬಿಜೆಪಿ ಸೇರ್ಪಡೆಗೊಂಡರು.
ಕೊಕ್ಕಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕಳೆಂಜ ಗ್ರಾಮದ ಕೃಷ್ಣಕುಮಾರ್ ಕಾರ್ಯತ್ತಡ್ಕ, ಗುರುನಾಥ್ ಕಾರ್ಯತಡ್ಕ, ಪಟ್ರಮೆ ಗ್ರಾಮದ ಲೀಯೋ ಪಟ್ಟೂರು ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಹರೀಶ್ ಪೂಂಜ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರು ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್ ಮುಖಂಡರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಭಾರಿ ಯತೀಶ್ ಆರ್ವಾರ್, ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಸುಬ್ರಮಣ್ಯ ಅಗರ್ತ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.