22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು.

ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ಅಭ್ಯರ್ಥಿ ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು ಪಟ್ಟಣ ಪಂಚಾಯತ್ ಸದಸ್ಯರಾದ, ಶರತ್ ಕುಮಾರ್, ಲೋಕೇಶ್, ನಾಮ ನಿರ್ದೇಶನ ಸದಸ್ಯರಾದ ಪ್ರಕಾಶ್ ಸಹಕಾರಿ ಭಾರತಿ ಅಧ್ಯಕ್ಷರಾಜೇಶ್ ಪೇರ್ಬುಡ ಉಪಸ್ಥಿತರಿದ್ದರು.

ಬಿಜೆಪಿ ಪ್ರಣಾಳಿಕೆಯಲ್ಲಿರುವ ಅಂಶಗಳು: ನಗರದ ಪ್ರಮುಖ ರಸ್ತೆಗಳನ್ನು ಸೌಂದರೀಕರಣಗೊಳಿಸಲಾಗುವುದು, ಸುಸಜ್ಜಿತ ಸಂತೆ ಮಾರುಕಟ್ಟೆ ಪ್ರಾಂಗಾಣ ಅಭಿವೃದ್ಧಿಗೊಳಿಸುವುದು, ಸುಸಜ್ಜಿತ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ಗೂಡ್ಸ್, ಟೆಂಪೋ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ, ನಿವೇಶನ ರಹಿತರಿಗೆ ನಿವೇಶನವನ್ನು ಒದಗಿಸುವುದು , ನಗರದ ಎಲ್ಲಾ ವಸತಿರಹಿತರಿಗೆ ವಸತಿಯನ್ನು ಒದಗಿಸುವುದು, ನಗರದ ಪ್ರತೀ ಮನೆಗಳಿಗೆ 12 ಗಂಟೆ ಕುಡಿಯುವ ನೀರಿನ ವ್ಯವಸ್ಥೆ, ನಗರದ ಪ್ರಮುಖ ಕೆರೆಗಳ ಅಭಿವೃದ್ಧಿ, ನಗರದ ಆಯ್ದ ಭಾಗದಲ್ಲಿ ಚಿಣ್ಣರ ಪಾರ್ಕ್ ನಿರ್ಮಾಣ , ಸಾಲು ಮರದ ತಿಮ್ಮಕ್ಕ ಟೀ ಪಾರ್ಕನ್ನು 2 ನೇ ಹಂತದ ಕಾರ್ಯಯೋಜನೆಯಾಗಿ ಅಭಿವೃದ್ಧಿ ಗೊಳಿಸುವುದು, ಸರಕಾರಿ ಮಾದರಿ ಶಾಲೆಗಳನ್ನು ಅಭಿವೃದ್ಧಿ ಗೊಳಿಸುವುದು , ನಗರದ ಹೈಟೆಕ್ ಸ್ಮಶಾನ ನಿರ್ಮಾಣ, ನಗರದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ನಿರ್ಮಾಣ ಮಾಡುವುದು.

Related posts

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಪಡಂಗಡಿ ನೌಷದ್ ಹಾಗೂ ಮತ್ತೊರ್ವ ಆರೋಪಿ ಅಬ್ದುಲ್ ನಾಸಿರ್ ಬಂಧನ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!