March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಮೇ 04 ರಂದು ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗಿಯಾದರು.

ಬೆಳ್ತಂಗಡಿ ಕ್ಷೇತ್ರದ ಬಂಧುಗಳು ಮೊದಲ ಬಾರಿಗೆ ಗೆಲ್ಲಿಸಿದಾಗ ರಸ್ತೆ ಕಿಂಡಿ ಅಣೆಕಟ್ಟು, ಶಾಲಾ- ಕಾಲೇಜು ಅಭಿವೃದ್ಧಿ, ಗ್ರಂಥಾಲಯ ನಿರ್ಮಾಣ, ಧಾರ್ಮಿಕ ಶ್ರದ್ಧಾ ಕೇಂದ್ರಗಳ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯೂ ಗೆಲ್ಲಿಸಿದರೆ ತಾಲೂಕನ್ನು ದೇಶಕ್ಕೆ ಮಾದರಿಯಾಗಿ ಅಭಿವೃದ್ಧಿಪಡಿಸುತ್ತೇನೆ ಎಂದು ಹರೀಶ್ ಪೂಂಜ ರವರು ಹೇಳಿದರು.

ಬಹಿರಂಗ ಪ್ರಚಾರ ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಹಿರಿಯರಾದ ಸುಬ್ರಮಣ್ಯ ಅಗರ್ತ, ಚಲನಚಿತ್ರ ನಟರಾದ ಹಿತೇಶ್ ಪೂಜಾರಿ ಕಾಪಿನಡ್ಕ ಹಾಗೂ ಅನೀಶ್ ಪೂಜಾರಿ ವೇಣೂರು, ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya
error: Content is protected !!