ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಇದರ ಸಹಯೋಗದೊಂದಿಗೆ, ನಮ್ಮ ನಡೆ ಮತಗಟ್ಟೆಯ ಕಡೆ ಮತದಾರರ ಜಾಗೃತಿ ಆಂದೋಲನ ಅಂಗವಾಗಿ ಸಂತೆಕಟ್ಟೆ ಬಳಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಮೇ.೭ರಂದು ಕಾಲ್ನಡಿಗೆ ಜಾಥಾ ಜರುಗಿತು.
ಬಳಿಕ ಎನ್. ಎಸ್.ಎಸ್. ವಿದ್ಯಾರ್ಥಿಗಳಿಂದ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾ.ನಿ.ಅಧಿಕಾರಿ ಕುಸುಮಾಧರ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಟರಾಜ್ ತಾಲೂಕು ಪಂಚಾಯತ್, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಎನ್. ಆರ್.ಎಲ್.ಎಂ.ಸಂಜೀವಿನಿ ಒಕ್ಕೂಟದ ಅಧಿಕಾರಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.